ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ 3,116 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,29,90,991ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದೊಂದು ದಿನದಲ್ಲಿ 5,559 ಜನರು ಸೋಂಕಿನಿಂದ ಗುಣಮುಖರಾಗುವ ಮೂಲಕ ದೇಶದಲ್ಲಿ ಒಟ್ಟಾರೆ 4,24,37,072 ಮಂದಿ ಪೂರ್ಣ ಚೇತರಿಸಿಕೊಂಡಂತಾಗಿದೆ. ಭಾರತದಲ್ಲಿ ಗುಣಮುಖರಾಗಿರುವವರ ಪ್ರಮಾಣ ಶೇಕಡಾ 98.71 ರಷ್ಟಿದೆ.