ನವದೆಹಲಿ: ಭಾರತದಲ್ಲಿ ಹೊಸದಾಗಿ 31,923 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 3.35 ಕೋಟಿಗೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 31,990 ಮಂದಿ ಗುಣಮುಖರಾಗಿದ್ದು, ಈವರೆಗೆ 3,28,15,731 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಸದ್ಯ ದೇಶದಲ್ಲಿ 3,01,604 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಕಳೆದ 187 ದಿನಗಳಿಂದ ಇದೇ ಮೊದಲ ಬಾರಿಗೆ ಕೋವಿಡ್ ಆ್ಯಕ್ಟಿವ್ ಕೇಸ್ಗಳು ಇಳಿಕೆಯಾಗಿವೆ. ನಿನ್ನೆ 282 ಮಂದಿ ವೈರಸ್ಗೆ ಬಲಿಯಾಗಿದ್ದು, ಒಟ್ಟಾರೆ 4,46,050 ಮಂದಿ ಮೃತಪಟ್ಟಿದ್ದಾರೆ.
ಸೆಪ್ಟೆಂಬರ್ 22 ರಂದು 71,38,205 ವ್ಯಾಕ್ಸಿನ್ ಡೋಸ್ಗಳನ್ನು ಹಾಕಲಾಗಿದ್ದು, ಈವರೆಗೆ 83,39,90,049 ಲಸಿಕಾ ಡೋಸ್ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಕೋವಿಡ್ನಿಂದ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೆ 50 ಸಾವಿರ ರೂ.ಪರಿಹಾರ : ಸುಪ್ರೀಂಕೋರ್ಟ್ಗೆ ಕೇಂದ್ರದ ಮಾಹಿತಿ
ಕಳೆದ 24 ಗಂಟೆಗಳಲ್ಲಿ 15,27,443 ಸ್ಯಾಂಪಲ್ಗಳನ್ನು ಟೆಸ್ಟ್ ಮಾಡಲಾಗಿದ್ದು, ನಿನ್ನೆವರೆಗೆ 55,83,67,013 ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.