ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 35,178 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಇನ್ನು 440 ಮಂದಿ ಸಾವನ್ನಪ್ಪಿದ್ದು, ಇಲ್ಲಿವರೆಗೆ 4,32,519 ಜನರು ಕೊನೆಯುಸಿರೆಳೆದಿದ್ದಾರೆ.
ದೇಶದಲ್ಲಿ ಕೊಂಚ ಏರಿಕೆಯಾದ ಕೊರೊನಾ: 35 ಸಾವಿರ ಹೊಸ ಪ್ರಕರಣ ಪತ್ತೆ - Corona update in India
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 35,178 ಹೊಸ ಕೋವಿಡ್ ಕೇಸ್ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,22,85,857ಕ್ಕೆ ಏರಿಕೆಯಾಗಿದೆ.
ಕೊರೊನಾ
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿಗೆ ಒಳಗಾದವರ ಸಂಖ್ಯೆ 3,22,85,857ಕ್ಕೆ ಏರಿಕೆಯಾಗಿದೆ. 3,14,85,923 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಉಳಿದಂತೆ 3,67,415 ಪ್ರಕರಣಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಜನವರಿಯಿಂದ ದೇಶಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಆರಂಭವಾಗಿದ್ದು, ಇಲ್ಲಿಯವರೆಗೆ ಒಟ್ಟು 56,06,52,030 ಮಂದಿಗೆ ಲಸಿಕೆಯನ್ನು ನೀಡಲಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ 55,05,075 ಮಂದಿ ವ್ಯಾಕ್ಸಿನ್ ಪಡೆದಿದ್ದಾರೆ.