ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 37,154 ಕೊರೊನಾ ಕೇಸ್ಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಒಟ್ಟು 39,649 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಚೇತರಿಕೆ ಪ್ರಮಾಣ ಶೇ.97.22 ರಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ: ಕಳೆದ 24 ಗಂಟೆಯಲ್ಲಿ 37,154 ಕೇಸ್ ಪತ್ತೆ - ಭಾರತ ಕೊರೊನಾ ಪ್ರಕರಣ
ಭಾರತದಲ್ಲಿ ಈವರೆಗೆ 3,00,14,713 ಮಂದಿ ಚೇತರಿಸಿಕೊಂಡಿದ್ದಾರೆ. ಇಂದು 37,154 ಕೋವಿಡ್ ಕೇಸ್ಗಳು ಪತ್ತೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಒಟ್ಟು 39,649 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ತಗ್ಗಿದ ಕೊರೊನಾ ಅಬ್ಬರ
ಭಾರತದಲ್ಲಿ ಈವರೆಗೆ 3,00,14,713 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿಯ ತನಕ 4,08,764 ಮಂದಿ ಸೋಂಕಿತರು ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಸೋಂಕಿಗೆ 724 ಮಂದಿ ಕೊನೆಯುಸಿರೆಳೆದಿದ್ದಾರೆ.
ದೇಶದಲ್ಲಿ ಇಲ್ಲಿಯವರೆಗೆ 3,08,74,376 ಕೋವಿಡ್ ಪ್ರಕರಣಗಳು ದಾಖಲಾಗಿದೆ. ಇದುವರೆಗೆ 37,73,52,501 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ. ಕಳೆದ 24 ಗಂಟೆಯಲ್ಲಿ 12,35,287 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ.