ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 38,949 ಕೊರೊನಾ ಕೇಸ್ಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಒಟ್ಟು 40,026 ಮಂದಿ ಗುಣಮುಖರಾಗಿದ್ದಾರೆ.
ಕೊಂಚ ತಗ್ಗಿದ ಕೊರೊನಾ ಎಫೆಕ್ಟ್: ಕಳೆದ 24 ಗಂಟೆಯಲ್ಲಿ 38,949 ಕೇಸ್ ಪತ್ತೆ - ಕೋವಿಡ್ ಅಪ್ಡೇಟ್ ಸುದ್ದಿ
ಕಳೆದ 24 ಗಂಟೆಗಳಲ್ಲಿ 38,949 ಕೊರೊನಾ ಪ್ರಕರಣ ದಾಖಲಾಗಿದ್ದು, 542 ಮಂದಿ ಕೊನೆಯುಸಿರೆಳೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೊರೊನಾ
ಭಾರತದಲ್ಲಿ ಈವರೆಗೆ ಕೊರೊನಾದಿಂದ 3,01,83,876 ಮಂದಿ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಯಲ್ಲಿ ಸೋಂಕಿಗೆ 542 ಮಂದಿ ಕೊನೆಯುಸಿರೆಳೆದಿದ್ದು, ಮೃತರ ಸಂಖ್ಯೆ 4,12,531 ಕ್ಕೆ ಏರಿದೆ. ಸದ್ಯ ದೇಶದಲ್ಲಿ 4,30,422 ಸಕ್ರಿಯ ಪ್ರಕರಣಗಳಿವೆ.
ಈವರೆಗೆ 3,10,26,829 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ 38,78,078 ಮಂದಿಗೆ ಲಸಿಕೆ ನೀಡಲಾಗಿದ್ದು, ಈವರೆಗೆ 39,53,43,767(39ಕೋಟಿ) ಜನರಿಗೆ ವ್ಯಾಕ್ಸಿನೇಷನ್ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ.
Last Updated : Jul 16, 2021, 10:44 AM IST