ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 43,654 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ 640 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 4,22,022 ಕ್ಕೆ ಏರಿದೆ.
ಮತ್ತೆ ಏರಿಕೆ ಕಂಡ Covid: ಕಳೆದ 24 ಗಂಟೆಯಲ್ಲಿ 43,654 ಕೇಸ್ ಪತ್ತೆ - COVID cases and India
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 43,654 ಕೋವಿಡ್ ಕೇಸ್ಗಳು ಪತ್ತೆಯಾಗಿದ್ದು, 41,678 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.
![ಮತ್ತೆ ಏರಿಕೆ ಕಂಡ Covid: ಕಳೆದ 24 ಗಂಟೆಯಲ್ಲಿ 43,654 ಕೇಸ್ ಪತ್ತೆ COVID](https://etvbharatimages.akamaized.net/etvbharat/prod-images/768-512-12595611-thumbnail-3x2-mng.jpg)
ಕೊರೊನಾ
ಸದ್ಯ 3,99,436 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಯಲ್ಲಿ 41,678 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 3,06,63,147 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈವರೆಗೆ 44,61,56,659 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ.