ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗಿವೆ. ಹೊಸದಾಗಿ 45,892 ಕೋವಿಡ್ ಕೇಸ್ಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಒಟ್ಟು 44,291 ಮಂದಿ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ. 97.18ರಷ್ಟು ಕಂಡುಬಂದಿದೆ.
ಭಾರತದಲ್ಲಿ ಇಲ್ಲಿಯವರೆಗೆ 3,07,09,557 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 2,98,43,825 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿಯ ತನಕ 4,05,028 ಮಂದಿ ಸೋಂಕಿತರು ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಸೋಂಕಿಗೆ 817 ಮಂದಿ ಕೊನೆಯುಸಿರೆಲೆದಿದ್ದಾರೆ.
ದೇಶದಲ್ಲಿ ಒಟ್ಟು 4,60,704 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಇದುವರೆಗೆ 36,48,47,549 ಮಂದಿಗೆ ವ್ಯಾಕ್ಸಿನ್ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 33,81,671 ಲಸಿಕೆ ನೀಡಲಾಗಿದೆ.
ದೇಶದಲ್ಲಿ ಪಾಸಿಟಿವಿಟಿ ದರ ಶೇ.1.50 ರಷ್ಟಿದ್ದು, ಗುಣಮುಖರ ಪ್ರಮಾಣ ಶೇ.97.18ರಷ್ಟಾಗಿದೆ. ಪ್ರತೀ ವಾರದ ಪಾಸಿಟಿವಿಟಿ ಪ್ರಮಾಣ ಶೇ.5 ಕ್ಕಿಂತ ಕಡಿಮೆಯಿದೆ. ದಿನದ ಪಾಸಿಟಿವಿಟಿ ಪ್ರಮಾಣವು ಶೇ. 2.42ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಜುಲೈ 7ರವರೆಗೆ 42,52,25,897 ಮಂದಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದು, ಕಳೆದ 24 ಗಂಟೆಯಲ್ಲಿ 18,93,800 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.