ನವದೆಹಲಿ:ಕಳೆದೊಂದು ದಿನದಲ್ಲಿ ದೇಶದಲ್ಲಿ 46,148 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 979 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇನ್ನು 58,578 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೇ ದೇಶದಲ್ಲಿ ಕೊರೊನಾ ಗುಣಮುಖ ಪ್ರಮಾಣ ಶೇ 96.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗಿನ ಅಂಕಿ-ಅಂಶಗಳು:
ದೇಶದಲ್ಲಿ ಈವರೆಗೆ ಒಟ್ಟು 3,02,79,331 ಕೊರೊನಾ ಪ್ರಕರಣಗಳು ದಾಖಲಾಗಿವೆ. 2,93,09,607 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 3,96,730 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ 5,72,994 ಸಕ್ರಿಯ ಕೋವಿಡ್ ಪ್ರಕರಣಗಳಿವೆ.