ನವದೆಹಲಿ: ಕಳೆದ 24 ಗಂಟೆಗಳಲ್ಲಿ 47,262 ಕೊರೊನಾ ಕೇಸ್ಗಳು ಪತ್ತೆಯಾಗಿದ್ದು, 275 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 1,17,34,058 ಹಾಗೂ ಮೃತರ ಸಂಖ್ಯೆ 1,60,441 ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 1,12,05,160 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3,68,457 ಆ್ಯಕ್ಟಿವ್ ಕೇಸ್ಗಳು ಇವೆ. ದೇಶದಲ್ಲಿ ಈವರೆಗೆ ಒಟ್ಟು 5,08,41,286 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.