ನವದೆಹಲಿ:ಸೋಮವಾರ ಭಾರತದಲ್ಲಿ 60,471 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 75 ದಿನಗಳ ಬಳಿಕ ಅತೀ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ.
ಇತ್ತ 24 ಗಂಟೆಗಳಲ್ಲಿ 1,17,525 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಸಾವಿನ ಸಂಖ್ಯೆಯಲ್ಲೂ ಸ್ವಲ್ಪ ಇಳಿಕೆ ಕಂಡುಬಂದಿದ್ದು, ನಿನ್ನೆ 2726 ಮಂದಿ ಅಸುನೀಗಿದ್ದಾರೆ.
ಚೇತರಿಕೆ ಪ್ರಮಾಣ ಶೇ. 95.64ಕ್ಕೆ ಏರಿಕೆ
ಇಲ್ಲಿಯವರೆಗೆ ದೇಶದಲ್ಲಿ ಒಟ್ಟು 2,95,70,881 ಕೋವಿಡ್ ಕೇಸ್ಗಳು ಪತ್ತೆಯಾಗಿದ್ದು, ಮೃತರ ಸಂಖ್ಯೆ 3,77,031ಕ್ಕೆ ಹೆಚ್ಚಳವಾಗಿದೆ. 2.95 ಕೋಟಿ ಸೋಂಕಿತರಲ್ಲಿ 2,82,80,472 ಮಂದಿ ವೈರಸ್ನಿಂದ ಚೇತರಿಸಿಕೊಂಡಿದ್ದು, 9,13,378 ಕೇಸ್ಗಳು ಸಕ್ರಿಯವಾಗಿವೆ. ಕಳೆದ 33 ದಿನಗಳಿಂದ ಹೊಸ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
25.90 ಕೋಟಿ ಡೋಸ್ ವ್ಯಾಕ್ಸಿನೇಷನ್
ಜನವರಿ 16ರಿಂದ ಈವರೆಗೆ ದೇಶಾದ್ಯಂತ ಕೊರೊನಾ ಲಸಿಕೆಯ 25,90,44,072 ಡೋಸ್ಗಳನ್ನು ಜನರಿಗೆ ನೀಡಲಾಗಿದೆ. ಇದರಲ್ಲಿ 20.98 ಕೋಟಿ ಜನರು ಮೊದಲ ಡೋಸ್ ಮಾತ್ರ ಪಡೆದಿದ್ದು, ಸುಮಾರು 4.88 ಕೋಟಿ ಜನರು ಎರಡೂ ಡೋಸ್ಗಳನ್ನು ಹಾಕಿಸಿಕೊಂಡಿದ್ದಾರೆ.