ನವದೆಹಲಿ: ಭಾರತದಲ್ಲಿ 62,714 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 28,739 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಕಳೆದ 24 ಗಂಟೆಗಳಲ್ಲಿ 312 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ಮಾಡಿದೆ.
24 ಗಂಟೆಯಲ್ಲಿ 312 ಸೋಂಕಿತರು ಸಾವು ದೇಶದಲ್ಲಿ ಈವರೆಗೆ ಒಟ್ಟು 1,19,71,624 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 1,13,23,762 ಸೋಂಕಿತರು ಗುಣಮುಖರಾಗಿದ್ದಾರೆ, ಸುಮಾರು 1,61,552 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸದ್ಯ ದೇಶದಲ್ಲಿ 3,04,809 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ ಹೆಚ್ಚೆಚ್ಚು ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ತಿದ್ದು, ಅವುಗಳಲ್ಲಿ 23,14,579 ಸೋಂಕಿತರು ಚೇತರಿಕೆ ಕಂಡಿದ್ದಾರೆ. 54,073 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ಮಾರ್ಚ್ 27 ರ ತನಕ 24,09,50,842 ರಷ್ಟು ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ ಎಂದು ICMR ತಿಳಿಸಿದೆ. ನಿನ್ನೆ ಒಂದು ದಿನ 11,81,289 ಸ್ಯಾಂಪಲ್ಸ್ಗಳನ್ನು ಪರೀಕ್ಷೆ ಮಾಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 6,02,69,782 ಜನರಿಗೆ ಕೋವಿಡ್ -19 ಲಸಿಕೆ ಹಾಕಲಾಗಿದೆ.