ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 6,538 ಮಂದಿಗೆ ಕೊರೊನಾ ಸೋಂಕು ತಗಲಿದ್ದು, 293 ಸೋಂಕಿತರು ಬಲಿಯಾಗಿದ್ದಾರೆ. ಇದೇ ಅವಧಿಯಲ್ಲಿ 6,450 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತೊಂದೆಡೆ, ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 653 ತಲುಪಿದೆ.
ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3 ಕೋಟಿ 47 ಲಕ್ಷ 99 ಸಾವಿರದ 691ಕ್ಕೆ ಏರಿಕೆಯಾಗಿದೆ. ಈ ಪೈಕಿ 4 ಲಕ್ಷ 80 ಸಾವಿರದ 290 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 75,456 ಸಕ್ರಿಯ ಪ್ರಕರಣಗಳಿವೆ. ಈವರೆಗೆ 3 ಕೋಟಿ 42 ಲಕ್ಷದ 43 ಸಾವಿರದ 945 ಮಂದಿ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ.
ಲಸಿಕೆ ವಿತರಣೆಗೆ ವೇಗ:
ದೇಶದಲ್ಲಿ ಲಸಿಕೆ ವಿತರಣೆ ವೇಗವಾಗಿ ಮುಂದುವರೆದಿದ್ದು, ನಿನ್ನೆ 72,87,547 ಜನರಿಗೆ ಲಸಿಕೆ ನೀಡಲಾಗಿದೆ. ಈವರೆಗೆ ವಿತರಿಸಿರುವ ಒಟ್ಟು ಡೋಸ್‌ಗಳ ಸಂಖ್ಯೆಯನ್ನು 1,42,46,81,736ಕ್ಕೆ ಏರಿಕೆಯಾಗಿದೆ.
ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ನಿರ್ಬಂಧಗಳಿಗೆ ಮುಂದಾಗಿವೆ. ರಾಜ್ಯದಲ್ಲಿ ಇಂದಿನಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ.
ಜಗತ್ತಿನ ಕೋವಿಡ್ ವಿವರ ಹೀಗಿದೆ..