ನವದೆಹಲಿ:ದೇಶದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೋವಿಡ್ ಸೋಂಕಿತ ಪ್ರಕರಣಗಳಲ್ಲಿ ಏರಿಕೆ ಕಂಡು ಬರಲು ಶುರುವಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆಯ 8,329 ಹೊಸ ಕೇಸ್ಗಳು ದಾಖಲಾಗಿವೆ. ಇದರ ಜೊತೆಗೆ 10 ಜನರು ಡೆಡ್ಲಿ ವೈರಸ್ಗೆ ಪ್ರಾಣ ಕಳೆದುಕೊಂಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4,216 ಜನರು ಕೋವಿಡ್ನಿಂದ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 40,370 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲೇ 3,081 ಕೋವಿಡ್ ಪ್ರಕರಣ ದಾಖಲಾಗಿದ್ದು, ಮುಂಬೈನಲ್ಲೇ 1,956 ಕೇಸ್ ಕಂಡು ಬಂದಿವೆ. ನಿನ್ನೆ ಒಂದೇ ದಿನ ದೇಶಾದ್ಯಂತ 3,44,994 ಜನರನ್ನ ಪರೀಕ್ಷೆಗೊಳಪಡಿಸಲಾಗಿದೆ. ಕೇರಳದಲ್ಲೂ 1,301 ಪ್ರಕರಣ ಹೊಸದಾಗಿ ಕಂಡು ಬಂದಿವೆ.