ನವದೆಹಲಿ:ದೇಶದಲ್ಲಿ ಪತ್ತೆಯಾಗುತ್ತಿರುವ ಹೊಸ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
70 ದಿನಗಳ ಬಳಿಕ ಅತೀ ಕಡಿಮೆ ಅಂದರೆ 84,332 ಕೇಸ್ಗಳು ವರದಿಯಾಗಿವೆ. ಆದರೆ 4,002 ಮಂದಿ ವೈರಸ್ಗೆ ಬಲಿಯಾಗಿದ್ದಾರೆ. ಈ ಮೂಲಕ ಭಾರತದ ಕೋವಿಡ್ ಪ್ರಕರಣಗಳ ಸಂಖ್ಯೆ 2,93,59,155 ಹಾಗೂ ಮೃತರ ಸಂಖ್ಯೆ 3,67,081ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ ಒಂದೇ ದಿನದಲ್ಲಿ 1,21,311 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ 2,79,11,384 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಉಳಿದಂತೆ 10,80,690 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
24.96 ಕೋಟಿ ಡೋಸ್ ವ್ಯಾಕ್ಸಿನೇಷನ್
ವ್ಯಾಕ್ಸಿನೇಷನ್ ವಿಚಾರಕ್ಕೆ ಬಂದರೆ, ಜನವರಿ 16ರಿಂದ ಈವರೆಗೆ ದೇಶಾದ್ಯಂತ ಕೋವಿಡ್ ಲಸಿಕೆಯ 24,96,00,304 ಡೋಸ್ಗಳನ್ನು ಜನರಿಗೆ ನೀಡಲಾಗಿದೆ. ಇದರಲ್ಲಿ 20 ಕೋಟಿಗೂ ಅಧಿಕ ಮಂದಿ ಮೊದಲ ಡೋಸ್ ಮಾತ್ರ ಪಡೆದಿದ್ದು, 4.78 ಕೋಟಿ ಜನರು ಎರಡೂ ಡೋಸ್ಗಳನ್ನು ಹಾಕಿಸಿಕೊಂಡಿದ್ದಾರೆ.