ಕರ್ನಾಟಕ

karnataka

ETV Bharat / bharat

ಭಾರತದಲ್ಲಿ 102 ದಿನಗಳ ಬಳಿಕ 40 ಸಾವಿರಕ್ಕಿಂತ ಕಡಿಮೆ ಕೊರೊನಾ ಪ್ರಕರಣ ವರದಿ - coronavirus affected in India last 24 hours

ದೇಶದಲ್ಲಿ ಕೊರೊನಾ ಗುಣಮುಖರ ಪ್ರಮಾಣ ಹೆಚ್ಚಾಗಿದ್ದು,102 ದಿನಗಳ ನಂತರ ಭಾರತವು 40,000 ಕ್ಕಿಂತ ಕಡಿಮೆ ಹೊಸ ಕೊರೊನಾ ಪ್ರಕರಣಗಳನ್ನು ವರದಿಯಾಗಿದೆ.

India reports less than 40,000 daily new cases after 102 days
ಭಾರತದಲ್ಲಿ 102 ದಿನಗಳ 40,000 ಕ್ಕಿಂತ ಕಡಿಮೆ ಕೊರೊನಾ ಪ್ರಕರಣಗಳು ವರದಿ

By

Published : Jun 29, 2021, 10:59 AM IST

ನವದೆಹಲಿ: ಕಳೆದೊಂದು ದಿನದಲ್ಲಿ ದೇಶದಲ್ಲಿ 37,566 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 907 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಇನ್ನು 56,994 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೇ ದೇಶದಲ್ಲಿ ಕೊರೊನಾ ಗುಣಮುಖರ ಪ್ರಮಾಣ ಶೇ. 96.87 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗಿನ ಅಂಕಿ-ಅಂಶಗಳು:

ದೇಶದಲ್ಲಿ ಈವರೆಗೆ ಒಟ್ಟು 3,03,16,897 ಕೊರೊನಾ ಪ್ರಕರಣಗಳು ದಾಖಲಾಗಿವೆ. 2,93,66,601 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 3,97,637 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ 5,52,659 ಸಕ್ರಿಯ ಕೋವಿಡ್​ ಪ್ರಕರಣಗಳಿವೆ.

ಕೋವಿಡ್ ಪರೀಕ್ಷೆ:

ಜೂನ್​ 28 ರವರೆಗೆ 40,81,39,287 ಮಂದಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ. ನಿನ್ನೆ ಒಂದೇ ದಿನ 17,68,008 ಸ್ಯಾಂಪಲ್​​ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ICMR ತಿಳಿಸಿದೆ.

ABOUT THE AUTHOR

...view details