ನವದೆಹಲಿ: ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಕಾರ್ಯನಿರ್ವಹಣೆ ಮತ್ತು ಸಮಗ್ರತೆಯ ಬಗ್ಗೆ ಇಂಡಿಯಾ ಕೂಟದ ನಾಯಕರು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಈ ಬಗ್ಗೆ ನಿರ್ಣಯವೊಂದನ್ನು ಅಂಗೀಕರಿಸಿದೆ. ಇವಿಎಂನಲ್ಲಿ ಬಿದ್ದಿರುವ ಮತಗಳು ಮತ್ತು ವಿವಿಪ್ಯಾಟ್ ಎಣಿಕೆ ಸರಿಹೊಂದುವಂತೆ ನೋಡಿಕೊಳ್ಳಬೇಕು ಮತ್ತು ಮತದಾರ ತಾನು ಹಾಕಿರುವ ಮತದಾನ ಖಚಿತಪಡಿಸಿಕೊಳ್ಳಲು ವಿವಿ ಪ್ಯಾಟ್ ರಸೀದಿ, ಪ್ರತ್ಯೇಕ ಬಾಕ್ಸ್‌ನಲ್ಲಿ ಬೀಳುವಂತೆ ವ್ಯವಸ್ಥೆ ಮಾಡಬೇಕು ಎಂದು ಇಂಡಿಯಾ ಒಕ್ಕೂಟದ ನಾಯಕರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
ಅವನು ಅಥವಾ ಅವಳ ಆಯ್ಕೆಯನ್ನು ಪರಿಶೀಲಿಸಿದ ನಂತರ ಅದನ್ನು ಪ್ರತ್ಯೇಕ ಮತ ಪೆಟ್ಟಿಗೆಯಲ್ಲಿ ಇರಿಸಬೇಕು. ಅವನು ಅಥವಾ ಅವಳು ತಾನು ಹಾಕಿದ ಮತ ಸರಿಯಾಗಿದೆ ಎಂದು ಖಚಿತ ಪಡಿಸಿಕೊಳ್ಳುವ ವ್ಯವಸ್ಥೆ ಮಾಡಬೇಕು ಎಂದು ಇಂಡಿಯಾ ಒಕ್ಕೂಟದ ನಾಯಕರು ಆಗ್ರಹಿಸಿದ್ದಾರೆ.
ಇಂಡಿಯಾ ಒಕ್ಕೂಟದ ಪಾಲುದಾರ ಪಕ್ಷಗಳ ನಾಯಕರು ಈ ಬಗ್ಗೆ ನಿರ್ಣಯವೊಂದನ್ನು ಅಂಗೀಕರಿಸಿದ್ದು, ಇವಿಎಂಗಳ ವಿನ್ಯಾಸ ಮತ್ತು ಕಾರ್ಯಾಚರಣೆಯ ಕುರಿತು ಹಲವಾರು ನಿರ್ದಿಷ್ಟ ಪ್ರಶ್ನೆಗಳೊಂದಿಗೆ ವಿವರವಾದ ಜ್ಞಾಪಕ ಪತ್ರವನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಿವೆ.ಮತಯಂತ್ರಗಳ ಬಗ್ಗೆ ಮತ್ತೆ ಇಂಡಿಯಾ ಒಕ್ಕೂಟದ ಪಕ್ಷಗಳು ದನಿ ಎತ್ತಿವೆ. ಈ ಬಗ್ಗೆ ಹಲವು ಅನುಮಾನಗಳನ್ನೂ ಕೂಡಾ ವ್ಯಕ್ತಪಡಿಸಿವೆ. ಇವಿಎಂಗಳ ಕಾರ್ಯನಿರ್ವಹಣೆ ಹಾಗೂ ಸಮಗ್ರತೆಯ ಬಗ್ಗೆ ಹಲವು ಅನುಮಾನಗಳಿವೆ ಎಂದು ಪ್ರತಿಪಕ್ಷಗಳ ನಾಯಕರು ಹೇಳಿದ್ದಾರೆ.