ನವದೆಹಲಿ: ಭಾರತೀಯ ಸೇನೆಯು ಭೂ ಪ್ರದೇಶದ ಮೇಲೆ ದಾಳಿ ನಡೆಸುವ ಸಾಮರ್ಥ್ಯ ಹೊಂದಿರುವ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ ಆವೃತ್ತಿಯನ್ನು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಯಶಸ್ವಿಯಾಗಿ ಪರೀಕ್ಷಿಸಿದೆ.
ಭಾರತೀಯ ಸೇನೆಯ ಸಾಹಸ: ಬ್ರಹ್ಮೋಸ್ ಭೂ - ದಾಳಿ ಕ್ಷಿಪಣಿ ಯಶಸ್ವಿ ಪರೀಕ್ಷೆ..! - ಬ್ರಹ್ಮೋಸ್ ಭೂ-ದಾಳಿ ಕ್ಷಿಪಣಿ ಯಶಸ್ವಿ ಪರೀಕ್ಷೆ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ, ಬ್ರಹ್ಮೋಸ್ ಕ್ರೂಸ್ ಕ್ಷಿಪಣಿ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ..
ಇಂದು ಬೆಳಗ್ಗೆ 10 ಗಂಟೆಗೆ ಕ್ಷಿಪಣಿಯನ್ನು ಪರೀಕ್ಷಿಸಲಾಗಿದ್ದು, ಕ್ಷಿಪಣಿಯ ಸಾಮರ್ಥ್ಯ ಪರೀಕ್ಷಿಸುವ ಸಲುವಾಗಿ ಈ ಪರೀಕ್ಷೆ ಮಾಡಲಾಗಿದೆ. ಬ್ರಹ್ಮೋಸ್ ಕ್ಷಿಪಣಿಯು ವಿಶ್ವದ ಅತಿ ವೇಗದ ಕಾರ್ಯಾಚರಣೆ ವ್ಯವಸ್ಥೆಯನ್ನು ಹೊಂದಿದ್ದು, ಹಾಗೂ ಇತ್ತೀಚೆಗೆ ಡಿಆರ್‌ಡಿಒ ಕ್ಷಿಪಣಿ ವ್ಯವಸ್ಥೆ ವ್ಯಾಪ್ತಿಯನ್ನು 298 ಕಿ.ಮೀ.ನಿಂದ 450 ಕಿ.ಮೀ.ಗೆ ವಿಸ್ತರಿಸಲಾಗಿದೆ.
ಕಳೆದ ಎರಡು ತಿಂಗಳಲ್ಲಿ ಡಿಆರ್‌ಡಿಒ ಹೊಸ ಮತ್ತು ಅಸ್ತಿತ್ವದಲ್ಲಿರುವ ಕ್ಷಿಪಣಿ ವ್ಯವಸ್ಥೆಗಳನ್ನು ಪರೀಕ್ಷಿಸುವಲ್ಲಿ ಯಶಸ್ವಿಯಾಗಿದೆ. 90 ರ ದಶಕದ ಉತ್ತರಾರ್ಧದಲ್ಲಿ ಭಾರತ ಮತ್ತು ರಷ್ಯಾ ನಡುವೆ ಜಂಟಿ ಸಹಭಾಗಿತ್ವ ಪ್ರಾರಂಭಿಸಿದ ನಂತರ, ಇದೀಗ ಬ್ರಹ್ಮೋಸ್ ಕ್ಷಿಪಣಿಯು ಎಲ್ಲ ಮೂರು ಸಶಸ್ತ್ರ ಪಡೆಗಳಿಗೆ ಪ್ರಬಲ ಅಸ್ತ್ರವಾಗಿದೆ.