ಗೋರಖ್‌ಪುರ(ಉತ್ತರ ಪ್ರದೇಶ):ಇದುವರೆಗೂ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸದಿರುವುದು ರಾಜಕೀಯ ಪಕ್ಷಗಳ ಪಾಲಿಗೆ ನಾಚಿಕೆಗೇಡು ಎಂದು ಪುರಿ ಪೀಠದ ಗೋವರ್ಧನ ಮಠದ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಶ್ರೀಗಳು ಶುಕ್ರವಾರ ಹೇಳಿದ್ದಾರೆ.
ಗೋರಖ್‌ಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೇಶಾದ್ಯಂತ ಪ್ರಸ್ತುತ ಪರಿಸ್ಥಿತಿ ಉಲ್ಲೇಖಿಸುತ್ತಾ, ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಲಾಗುವುದು ಎಂದು ಭವಿಷ್ಯ ನುಡಿದರು.
ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ (ಮಾಧ್ಯಮಗಳು) ಭಾರತವನ್ನು ಹಿಂದೂ ರಾಷ್ಟ್ರವಾಗಲು ಕಾರಣ ಕಂಡುಕೊಂಡರೆ, ಅದು ನಮ್ಮನ್ನು ಬೆಂಬಲಿಸಬೇಕು. ಮಾಧ್ಯಮಗಳ ಸಹಕಾರ ಮತ್ತು ಜವಾಬ್ದಾರಿಯ ಪ್ರಜ್ಞೆಯಿಂದ ನಮಗೆ ಮತ್ತಷ್ಟು ಶಕ್ತಿ ಬರುತ್ತದೆ ಎಂದು ಸ್ವಾಮಿ ನಿಶ್ಚಲಾನಂದ ಸರಸ್ವತಿ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.