ನವದೆಹಲಿ:ಮುಂದಿನ ಹಣಕಾಸು ವರ್ಷದಲ್ಲಿ ಭಾರತವು 100 ಟನ್ ನೈಸರ್ಗಿಕ ಯುರೇನಿಯಂ ಮತ್ತು 133 ಇಂಧನ ಜೋಡಣಾ ಯುನಿಟ್ಗಳನ್ನು ಆಮದು ಮಾಡಿಕೊಳ್ಳಲಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಾಹಿತಿ ನೀಡಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ 2022-23ರ ಅವಧಿಯಲ್ಲಿ 100 ಟನ್ ನೈಸರ್ಗಿಕ ಯುರೇನಿಯಂ ಆಮದು ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಇದರ ಜೊತೆಗೆ 133 ಇಂಧನ ಜೋಡಣಾ ಯುನಿಟ್ಗಳನ್ನು ಆಮದು ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಕೂಡಂಕುಳಂನಲ್ಲಿರುವ ರಷ್ಯಾದ ರಿಯಾಕ್ಟರ್‌ಗಳಿಗೆ ಇಂಧನ ಪೂರೈಕೆಗಾಗಿ ಭಾರತ ಸರ್ಕಾರವು ರಷ್ಯಾದ ಒಕ್ಕೂಟದ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ರಷ್ಯಾ ಜೊತೆಗೆ ಕೆನಡಾ, ಕಜಕಿಸ್ತಾನ್, ರಷ್ಯಾ ಮತ್ತು ಉಜ್ಬೇಕಿಸ್ತಾನ್‌ನೊಂದಿಗೆ ಯುರೇನಿಯಂ ಖರೀದಿ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.