ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ಮುಕ್ತಾಯಗೊಳ್ಳುತ್ತಿದ್ದಂತೆ ಇದೀಗ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಹೊಸ ರೂಪಾಂತರ ಒಮಿಕ್ರಾನ್ ಭಯ ಶುರುವಾಗಿದೆ. ಇದೇ ಕಾರಣಕ್ಕಾಗಿ ಮುಂದಿನ ತಿಂಗಳ ಜನವರಿ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟದ ಮೇಲೆ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ನಿರ್ಬಂಧ ವಿಧಿಸಿದೆ.
ಕಳೆದ ಕೆಲ ದಿನಗಳ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದ ವಿಮಾನಯಾನ ನಾಗರಿಕ ಇಲಾಖೆ, ಡಿಸೆಂಬರ್ 15ರಿಂದ ಅಂತಾರಾಷ್ಟ್ರೀಯ ವಿಮಾನ ಸೇನೆ ಪುನಾರಂಭ ಮಾಡುವುದಾಗಿ ತಿಳಿಸಿತ್ತು. ಆದರೆ, ಇದೀಗ ವಿದೇಶಗಳಲ್ಲಿ ಒಮಿಕ್ರಾನ್ ಭೀತಿ ಹೆಚ್ಚಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಹೊರಹಾಕಿದೆ.
ಕೋವಿಡ್ ಕಾರಣದಿಂದಾಗಿ ಭಾರತ ಕಳೆದ ವರ್ಷ 2020ರ ಮಾರ್ಚ್ 23ರಿಂದಲೂ ಅಂತಾರಾಷ್ಟ್ರೀಯ ವಿಮಾನ ಹಾರಾಟದ ಮೇಲೆ ನಿರ್ಬಂಧ ಹಾಕಿದೆ. ಆದರೆ, ವಂದೇ ಭಾರತ್ ಮಿಶನ್ ಅಡಿ ಅನೇಕ ವಿಶೇಷ ವಿಮಾನಗಳು ಹಾರಾಟ ನಡೆಸುತ್ತಿದ್ದು, ವಿದೇಶದಿಂದ ಭಾರತಕ್ಕೆ ಬರುವವರನ್ನ ಹೊತ್ತು ತಂದಿವೆ.