ನವೆದೆಹಲಿ :ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 18,732 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,01,87,850ಕ್ಕೆ ಏರಿದೆ.
ಕಳೆದ 24 ಗಂಟೆಯಲ್ಲಿ 18,732 ಹೊಸ ಕೊರೊನಾ ಪ್ರಕರಣಗಳು ವರದಿ
ನಿನ್ನೆ 9,42,368 ಮಾದರಿಗಳನ್ನು ಪರೀಕ್ಷಿಸಿದ್ದು, ಡಿಸೆಂಬರ್ 8ರವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳು 16,81,02,657 ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ..
ಕಳೆದ 24 ಗಂಟೆಯಲ್ಲಿ 18,732 ಹೊಸ ಕೊರೊನಾ ಪ್ರಕರಣಗಳು ವರದಿ
279 ಜನ ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,47,622ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 21,430 ಜನ ಕೋವಿಡ್-19ನಿಂದ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 97,61,538ಕ್ಕೆ ಏರಿದೆ. 2,78,690 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.
ನಿನ್ನೆ 9,42,368 ಮಾದರಿಗಳನ್ನು ಪರೀಕ್ಷಿಸಿದ್ದು, ಡಿಸೆಂಬರ್ 8ರವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳು 16,81,02,657 ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.