ನವದೆಹಲಿ: ಕಳೆದ 24 ಗಂಟೆಗಳಲ್ಲಿ 37,975 ಕೊರೊನಾ ಸೋಂಕಿತರು ಪತ್ತೆಯಾಗುವ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ.
ನಿನ್ನೆ 480 ಮಂದಿ ಕೊರೊನಾದಿಂದ ಕೊನೆಯುಸಿರೆಳೆದಿದ್ದು, ಈವರೆಗೆ ಒಟ್ಟು 1,34,218 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 42,314 ಮಂದಿ ಗುಣಮುಖರಾಗಿದ್ದಾರೆ.