ನವದೆಹಲಿ: ಭಾರತವು ಜಾಗತಿಕವಾಗಿ ಸ್ಟಾರ್ಟ್‌ಅಪ್‌ಗಳಿಗೆ ಮೂರನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆಯಾಗಿದೆ. 2024ರ ವೇಳೆಗೆ ದೇಶವು ಜರ್ಮನಿಯನ್ನು ಹಿಂದಿಕ್ಕಿ ನಾಲ್ಕನೇ ಅತಿದೊಡ್ಡ ಆರ್ಥಿಕತೆ ರಾಷ್ಟ್ರವಾಗಲಿದೆ ಎಂದು ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (Chief of Defence Staff -CDS) ಜನರಲ್ ಅನಿಲ್ ಚೌಹಾಣ್ ಹೇಳಿದರು.
ನವದೆಹಲಿಯಲ್ಲಿ ನಡೆದ ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತವು ಜಾಗತಿಕವಾಗಿ ಸ್ಟಾರ್ಟ್‌ಅಪ್‌ಗಳಿಗೆ ಮೂರನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆಯಾಗಿ ಹೊರಹೊಮ್ಮುತ್ತಿದೆ. ಸರ್ಕಾರದಿಂದ ಗುರುತಿಸಲ್ಪಟ್ಟ 84,000ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಇಂದು ಅಸ್ತಿತ್ವದಲ್ಲಿವೆ. 2024ರ ವೇಳೆಗೆ ನಾವು ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಲು ಆಶಿಸುತ್ತೇವೆ ಎಂದರು.
ಮೇಕ್ ಇನ್ ಇಂಡಿಯಾ ಉಪಕ್ರಮದ ಅಡಿಯಲ್ಲಿ ಸರ್ಕಾರದ ನೀತಿಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರ್ಕಾರವು ಕೈಗಾರಿಕಾ ಪರವಾನಗಿ ವ್ಯವಸ್ಥೆಯನ್ನು ಸರಳಗೊಳಿಸಿದೆ. ಎಫ್‌ಡಿಐ ಮಿತಿಯನ್ನು ಹೆಚ್ಚಿಸಿದೆ. ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಎಂಎಸ್‌ಎಂಇಗಳಿಗೆ ನಿಧಿಗಳನ್ನು ಗುರುತಿಸಿದೆ. ರಕ್ಷಣಾ ಉತ್ಪಾದನೆಯಲ್ಲಿ ಖಾಸಗಿ ಕಂಪನಿಗಳಿಗೆ ಸಮತಟ್ಟಾದ ಅವಕಾಶ ಒದಗಿಸಿದೆ ಎಂದು ತಿಳಿಸಿದರು.