ಕಿಶ್ತ್ವಾರ್ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ನವಪಾಚಿ ಪ್ರದೇಶದಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಭೇದಿಸುವಲ್ಲಿ ಭಾರತೀಯ ಸೇನೆ ಹಾಗೂ ಪೊಲೀಸರು ಯಶಸ್ವಿಯಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಗುಪ್ತಚರ ಮಾಹಿತಿ ಮೇರೆಗೆ ಯೋಧರು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ, ಉಗ್ರರ ಅಡಗುತಾಣ ಪತ್ತೆ ಹಚ್ಚಿದೆ. ಇದರಲ್ಲಿದ್ದ ಅನೇಕ ಬುಲೆಟ್ಗಳು ಸೇರಿ ಶಸ್ತ್ರಾಸ್ತ್ರಗಳನ್ನು ಭದ್ರತಾ ಸಿಬ್ಬಂದಿ ಜಪ್ತಿ ಮಾಡಿದ್ದಾರೆ.