ನವದೆಹಲಿ:ರಷ್ಯಾ ಆಕ್ರಮಣದಿಂದ ಉಕ್ರೇನ್ನಲ್ಲಿ ಉದ್ವಿಗ್ನತೆ ಆವರಿಸಿದೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಕಾರ್ಯ ಚುರುಕಾಗಿದೆ. ಇಂದು ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ ವಿವಿಧೆಡೆಯಿಂದ 628 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ. ಹಂತ ಹಂತವಾಗಿ ಭಾರತೀಯರನ್ನು ಕರೆತರಲಾಗುತ್ತಿದ್ದು, ಇನ್ನೂ ಹಲವರು ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಹೀಗೆ ಉಕ್ರೇನ್ನಲ್ಲಿ ಸಿಲುಕಿರುವ ಕುಟುಂಬವು ತಮ್ಮನ್ನು ರಕ್ಷಿಸುವಂತೆ ಮನವಿ ಮಾಡಿಕೊಂಡಿದೆ.
ನಾಲ್ವರು ಸದಸ್ಯರನ್ನೊಳಗೊಂಡ ಕುಟುಂಬವು ಉಕ್ರೇನ್‌ನ ರಾಜಧಾನಿ ಕೀವ್‌ನಿಂದ ತಮ್ಮನ್ನು ರಕ್ಷಿಸುವಂತೆ ಮನವಿಯನ್ನು ಕಳುಹಿಸಿದೆ. ಮಂಗಳವಾರದ ವೇಳೆಗೆ ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ಭಾವಿಸಲಾಗಿದೆ, ಆದರೆ ರಷ್ಯಾದ ಆಕ್ರಮಣದ ನಡುವೆ ಈ ನಗರವನ್ನು ತೊರೆಯಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.
"ನಮ್ಮದು ನಾಲ್ವರ ಕುಟುಂಬ. ನಾನು ಡಾ. ರಾಜ್‌ಕುಮಾರ್ ಸಂತಾಲಾನಿ, ನನ್ನ ಪತ್ನಿ ಮಯೂರಿ ಮೋಹನಂದನೆ, ನನ್ನ ಮಗಳು ಜ್ಞಾನ ರಾಜ್ ಸಂತಾಲಾನಿ ಮತ್ತು ನನ್ನ ಮಗ ಪಾರ್ಥ ಸಂತಾಲಾನಿ. ಉಕ್ರೇನ್ ರಾಜಧಾನಿ ಕೀವ್‌ನಿಂದ ಹೊರಬರಲು ಸಾಧ್ಯವಾಗುತ್ತಿಲ್ಲ" ಎಂದು ವಿಡಿಯೋದಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ..