ಕರ್ನಾಟಕ

karnataka

ETV Bharat / bharat

ಕೀವ್​ನಲ್ಲಿ ಗುಂಡೇಟು ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿ ಇಂದು ಭಾರತಕ್ಕೆ ಆಗಮನ

ಉಕ್ರೇನ್‌ನ ರಾಜಧಾನಿ ಕೀವ್​ನಲ್ಲಿ ನಡೆದ ಯುದ್ಧದಲ್ಲಿ ಬುಲೆಟ್ ತಗುಲಿ ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿ ಹರ್ಜೋತ್ ಸಿಂಗ್ ಸೋಮವಾರ ಭಾರತಕ್ಕೆ ಆಗಮಿಸಲಿದ್ದಾರೆ ಎಂದು ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ವಿ.ಕೆ ಸಿಂಗ್ ಭಾನುವಾರ ತಿಳಿಸಿದ್ದಾರೆ.

ಹರ್ಜೋತ್ ಸಿಂಗ್
ಹರ್ಜೋತ್ ಸಿಂಗ್

By

Published : Mar 7, 2022, 8:45 AM IST

ನವದೆಹಲಿ: ದಿನದಿಂದ ದಿನಕ್ಕೆ ರಷ್ಯಾ ಮತ್ತು ಉಕ್ರೇನ್ ನಡುವಣ ಕದನ ತೀವ್ರಗೊಳ್ಳುತ್ತಿದೆ. ಉಕ್ರೇನ್ ರಾಜಧಾನಿ ಕೀವ್​​ನಲ್ಲಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಭಾರತೀಯ ವಿದ್ಯಾರ್ಥಿ ಇಂದು ದೇಶಕ್ಕೆ ಆಗಮಿಸಲಿದ್ದಾರೆ ಎಂದು ರಸ್ತೆ ಸಾರಿಗೆ, ಹೆದ್ದಾರಿ ಮತ್ತು ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ವಿ.ಕೆ ಸಿಂಗ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ವಿಜಯ್ ಕುಮಾರ್ ಸಿಂಗ್, ಕೀವ್​ನಲ್ಲಿ ನಡೆದ ಸಂಘರ್ಷದಲ್ಲಿ ಗುಂಡೇಟಿಗೆ ಒಳಗಾಗಿ, ಪಾಸ್‌ಪೋರ್ಟ್ ಕಳೆದುಕೊಂಡಿದ್ದ ಭಾರತೀಯ ವಿದ್ಯಾರ್ಥಿ ಹರ್ಜೋತ್ ಸಿಂಗ್ ಸೋಮವಾರ ಭಾರತ ತಲುಪಲಿದ್ದಾರೆ. ಕುಟುಂಬಸ್ಥರ ಆರೈಕೆಯೊಂದಿಗೆ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಅಂತಾ ತಿಳಿಸಿದ್ದಾರೆ.

ಶುಕ್ರವಾರ ಕೀವ್​ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮಾತನಾಡಿದ ಹರ್ಜೋತ್ ಸಿಂಗ್, ಭಾರತೀಯ ರಾಯಭಾರ ಕಚೇರಿಯು ಈ ಹಿಂದೆ ಎಲ್ಲರೂ ಕೀವ್​ ತೊರೆಯಬೇಕು ಎಂದು ಮನವಿ ಮಾಡಿತ್ತು. ಈ ಹಿನ್ನೆಲೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ನನಗೆ ಗುಂಡೇಟು ತಗುಲಿ, ಗಾಯಗಳಾಗಿತ್ತು. ಈ ವೇಳೆ ನನ್ನ ದಾಖಲೆಗಳು ಮಿಸ್​ ಆಗಿದ್ದು, ಭಾರತೀಯ ರಾಯಭಾರ ಕಚೇರಿ ಸಹಕರಿಸಿ, ಭಾರತಕ್ಕೆ ತೆರಳಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದರು.

ಉಕ್ರೇನ್‌ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆ ಉಕ್ರೇನ್‌ಗೆ ಹೊಂದಿಕೊಂಡಿರುವ ನೆರೆ ದೇಶಗಳ ಸಹಕಾರದೊಂದಿಗೆ ಭಾರತೀಯರನ್ನು ವಿಮಾನದ ಮೂಲಕ ದೇಶಕ್ಕೆ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ.

ABOUT THE AUTHOR

...view details