ಕರ್ನಾಟಕ

karnataka

ETV Bharat / bharat

ಉಕ್ರೇನ್‌ ಗಡಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹಲ್ಲೆ, ಕಿರುಕುಳ - ರೊಮೇನಿಯನ್ ಮತ್ತು ಪೋಲೆಂಡ್ ಗಡಿ

ಉಕ್ರೇನ್‌ ನೆರೆ ದೇಶಗಳಾದ ರೊಮೇನಿಯನ್ ಮತ್ತು ಪೋಲೆಂಡ್ ಗಡಿಯಲ್ಲಿ ನಿಯೋಜಿಸಲಾದ ಸೈನಿಕರು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಖಾರ್ಕಿವ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Ukraine border
Ukraine border

By

Published : Feb 28, 2022, 9:50 AM IST

Updated : Feb 28, 2022, 10:26 AM IST

ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಮುಂದುವರೆದಿದೆ. ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರ ಸ್ಥಿತಿ ಶೋಚನಿಯವಾಗಿದ್ದು, ರೊಮೇನಿಯನ್ ಮತ್ತು ಪೋಲೆಂಡ್ ಗಡಿಯಲ್ಲಿ ನಿಯೋಜಿಸಲಾದ ಸೈನಿಕರು ಕಿರುಕುಳದ ಜೊತೆಗೆ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಭಾರತೀಯ ರಾಯಭಾರ ಕಚೇರಿ ಭಾನುವಾರ ಮಾರ್ಗಸೂಚಿ ಹೊರಡಿಸಿ, ಭಾರತೀಯ ಪ್ರಜೆಗಳು ಸಂಘರ್ಷ ವಲಯಗಳಿಂದ ದೂರ ಹೋಗುವಂತೆ ಸೂಚಿಸಿದೆ. ಪೋಲೆಂಡ್, ರೊಮೇನಿಯಾ ಮತ್ತು ಹಂಗೇರಿ ಗಡಿಯಲ್ಲಿ ಚೆಕ್​ಪಾಯಿಂಟ್​ಗಳನ್ನು ತೆರೆಯಲಾಗಿದ್ದು, ವಿದ್ಯಾರ್ಥಿಗಳು ಗಡಿ ಚೆಕ್‌ಪೋಸ್ಟ್‌ಗಳಿಗೆ ಹೊರಡುವಂತೆ ಸೂಚಿಸಿದೆ.

ಖಾರ್ಕಿವ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಯೊಬ್ಬರು ಈಟಿವಿ ಭಾರತ್‌ನೊಂದಿಗೆ ಮಾತನಾಡಿ, ಪ್ರತಿ ದಿನ ಬಂಕರ್​ಗಳಲ್ಲಿ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಸ್ಥಳಾಂತರಿಸಲು ಕೀವ್‌ನಿಂದ ಪಶ್ಚಿಮ ಗಡಿಗಳಿಗೆ ಕರೆದೊಯ್ಯುಲಾಗುತ್ತಿದೆ. ಆದರೆ ಪೋಲೆಂಡ್ ಮತ್ತು ರೊಮೇನಿಯಾದ ಗಡಿಗಳಲ್ಲಿ ರಷ್ಯಾ ಸೈನಿಕರಿಂದ ಅವರು ಕಿರುಕುಳ ಅನುಭವಿಸುತ್ತಿದ್ದಾರೆ. ಈ ಕುರಿತಾದ ವಿಡಿಯೋಗಳನ್ನ ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಭಾರತೀಯ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಮಾಡುತ್ತಿರುವ ಸೈನಿಕರು

ಖಾರ್ಕಿವ್‌ನಲ್ಲಿ ಸಿಲುಕಿರುವ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಅಮೀನ್ ಅವರು ಈಗಾಗಲೇ ಆಹಾರ ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿದ್ದೇವೆ. ಇಲ್ಲಿನ ಪರಿಸ್ಥಿತಿ ಅತ್ಯಂತ ಕೆಟ್ಟದಾಗಿದ್ದು, ಮುಂದೆ ಏನು ಎಂದು ನಮಗೆ ತಿಳಿದಿಲ್ಲ ಅಂತಾ ಆತಂಕ ವ್ಯಕ್ತಪಡಿಸಿದ್ದಾರೆ.

ಪೋಲೆಂಡ್, ರೊಮೇನಿಯಾ, ಹಂಗೇರಿ ಮತ್ತು ಸ್ಲೋವಾಕ್ ಗಣರಾಜ್ಯ ಗಡಿಗಳ ಮೂಲಕ ಭಾರತೀಯ ಪ್ರಜೆಗಳನ್ನು ತವರಿಗೆ ಸ್ಥಳಾಂತರಿಸುವ ಉದ್ದೇಶದಿಂದ 24x7 ನಿಯಂತ್ರಣ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ಟ್ವೀಟ್ ಮಾಡಿದೆ.

Last Updated : Feb 28, 2022, 10:26 AM IST

ABOUT THE AUTHOR

...view details