ನವದೆಹಲಿ :'ಬುಲ್ಲಿ ಬಾಯಿ' ಆ್ಯಪ್‌ನ ಹಿಂದಿನ ಮಾಸ್ಟರ್‌ಮೈಂಡ್ ಎಂದು ಹೇಳಲಾದ 18 ವರ್ಷದ ಹುಡುಗಿಯನ್ನು ಮುಂಬೈ ಪೊಲೀಸ್ ತಂಡವು ಉತ್ತರಾಖಂಡದಲ್ಲಿ ಬಂಧಿಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಿದ್ಧಾಂತದಿಂದ 18 ರಿಂದ 21 ವರ್ಷದ ಯುವಕರು ಅಪರಾಧ ಎಸಗುತ್ತಿರುವುದು ಬೇಸರ ತಂದಿದೆ ಎಂದಿದ್ದಾರೆ.
ಯುವಕರಲ್ಲಿ ದ್ವೇಷ ಭಾವನೆ ಹೆಚ್ಚಾಗುತ್ತಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ನಿರತರಾಗುವ ಬದಲು, ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕೈಗೆ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ದ್ವೇಷಕ್ಕೆ ಭಾರತೀಯ ಯುವಕರು ಬಲಿಯಾಗುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.