ನವದೆಹಲಿ:ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸಿದ ಬೆನ್ನಲ್ಲೇ, ಉಕ್ರೇನ್ನಲ್ಲಿ ನೆಲೆಸಿದ್ದ ಭಾರತೀಯರಿದ್ದ ಏರ್ ಇಂಡಿಯಾ ವಿಮಾನ ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ಭಾರತ ಸರ್ಕಾರ ಉಕ್ರೇನ್ನಲ್ಲಿ ನೆಲೆಸಿರುವ ಭಾರತೀಯರು ದೇಶ ತೊರೆಯುವಂತೆ ಮನವಿ ಮಾಡಿ, ವಿಶೇಷ ವಿಮಾನ ವ್ಯವಸ್ಥೆ ಮಾಡಿತ್ತು. ಅದರಂತೆ ಮೊದಲ ವಿಮಾನ 2 ದಿನಗಳ ಹಿಂದೆಯೇ 241 ಜನರನ್ನು ದೇಶಕ್ಕೆ ತಂದಿಳಿಸಿತ್ತು. ಅದರಂತೆ ನಿನ್ನೆ ರಾತ್ರಿಯೇ ಉಕ್ರೇನ್ನಿಂದ 2 ನೇ ವಿಶೇಷ ವಿಮಾನ ಮತ್ತಷ್ಟು ಭಾರತೀಯರನ್ನು ಹೊತ್ತು ಇಂದು ಬೆಳಗ್ಗೆ ದೆಹಲಿ ನಿಲ್ದಾಣಕ್ಕೆ ಬಂದಿಳಿದಿದೆ.
'ಉಕ್ರೇನ್ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ನಾವು ಅಲ್ಲಿಂದ ಹೊರಡಲು ಸಿದ್ಧವಾದೆವು. ಅದರಂತೆ ಭಾರತೀಯ ದೂತಾವಾಸ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಿ ವಿಮಾನದ ವ್ಯವಸ್ಥೆ ಬಗ್ಗೆ ತಿಳಿದುಕೊಂಡು, ಇದೀಗ ತಾಯ್ನಾಡಿಗೆ ವಾಪಸ್ ಬಂದಿದ್ದೇವೆ' ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.