ಕರ್ನಾಟಕ

karnataka

ETV Bharat / bharat

ಭಾರತದ ಕೊರೊನಾ ಕದನ: ನಿನ್ನೆ 13,823 ಹೊಸ ಕೋವಿಡ್ ಕೇಸ್​ಗಳು​ ಪತ್ತೆ - ಕೊರೊನಾ ಪರೀಕ್ಷೆ

ದೇಶದಲ್ಲಿ ನಿನ್ನೆ 7,64,120 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, 13,823 ಮಂದಿಯ ವರದಿ ಮಾತ್ರ ಪಾಸಿಟಿವ್​ ಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ.

COVID-19
COVID-19

By

Published : Jan 20, 2021, 12:15 PM IST

ನವದೆಹಲಿ: ಭಾರತದಲ್ಲಿ ಈವರೆಗೆ ಒಟ್ಟು 1,05,95,660 ಕೋವಿಡ್-19 ಕೇಸ್​ಗಳು ದೃಢಪಟ್ಟಿದ್ದು, ಈ ಪೈಕಿ 1,02,45,741 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಈ ಹಿಂದೆ ನಿತ್ಯ ಸಾವಿರಕ್ಕೂ ಹೆಚ್ಚು ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದರು. ಆದರೆ, ನಿನ್ನೆ 162 ಸೋಂಕಿತರು ಸಾವನ್ನಪ್ಪಿದ್ದು, ದೇಶದಲ್ಲಿ ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 1,52,718 ಕ್ಕೆ ಏರಿಕೆಯಾಗಿದೆ. ಜೊತೆಗೆ ನಿನ್ನೆ 13,823 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿವೆ.

ಇನ್ನು ಒಟ್ಟು ಸೋಂಕಿತರ ಪೈಕಿ 1,02,45,741 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 1,97,201 ಕೇಸ್​​ಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪ್ರಕಾರ, ಜನವರಿ 19 ರವರೆಗೆ 18,85,66,947 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ನಿನ್ನೆ ಒಂದೇ ದಿನ 7,64,120 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ABOUT THE AUTHOR

...view details