ನವದೆಹಲಿ: ಭಾರತದ ಕೊರೊನಾ ಲಸಿಕೆ ವ್ಯಾಪ್ತಿಯು 74 ಕೋಟಿ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈ ಬಗ್ಗೆ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವಾಲಯವು, 'ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಭಾರತವು ಮತ್ತೊಂದು ಸಾಧನೆಯೊಂದಿಗೆ ಮುನ್ನಡೆಯುತ್ತಿದೆ. ಇಲ್ಲಿಯವರೆಗೆ 74 ಕೋಟಿ ಕೋವಿಡ್ ಲಸಿಕೆಯನ್ನು ಜನರಿಗೆ ನೀಡಲಾಗಿದೆ' ಎಂದು ಹೇಳಿದೆ.