ನವದೆಹಲಿ: ಶನಿವಾರ 22 ಲಕ್ಷ ಕೋವಿಡ್ ವ್ಯಾಕ್ಸಿನ್ ಡೋಸ್‌ಗಳನ್ನು ನೀಡುವುದರೊಂದಿಗೆ ದೇಶಾದ್ಯಂತ ಈವರೆಗೆ 145.40 ಕೋಟಿ ಲಸಿಕೆಯ ಡೋಸ್‌ಗಳನ್ನು ವಿತರಿಸಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಶನಿವಾರ ತಡರಾತ್ರಿ ವೇಳೆಗೆ ಕೊರೊನಾ ವಿರುದ್ಧ ನೀಡುತ್ತಿರುವ ಲಸಿಕೆ ವಿತರಣೆಯನ್ನು ಲೆಕ್ಕ ಹಾಕಿದರೆ ಈ ಸಂಖ್ಯೆ ಇನ್ನೂ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಕೇಂದ್ರದ ಆರೋಗ್ಯ ಸಚಿವಾಲಯ ಹೇಳಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 18-44 ವಯಸ್ಸಿನ ವ್ಯಕ್ತಿಗಳಿಗೆ 50,04,54,035 ಮೊದಲ ಡೋಸ್‌ಗಳನ್ನು ನೀಡಲಾಗಿದೆ ಮತ್ತು ಹಂತ-3ರ ಪ್ರಾರಂಭದಿಂದಲೂ ಅದೇ ವಯಸ್ಸಿನವರಿಗೆ 33,50,59,168 ಎರಡನೇ ಡೋಸ್‌ಗಳನ್ನು ನೀಡಲಾಗಿದೆ.
ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ ವ್ಯಾಕ್ಸಿನೇಷನ್ ಡ್ರೈವ್ ಅನ್ನು 2021ರ ಜನವರಿ 15ರಿಂದ ದೇಶಾದ್ಯಂತ ಬೃಹತ್ ಲಸಿಕಾ ಅಭಿಯಾನ ಆರಂಭಿಸಲಾಯಿತು. ಒಟ್ಟಾರೆಯಾಗಿ 84,54,89,349 ಮೊದಲ ಡೋಸ್‌ಗಳನ್ನು ನೀಡಲಾಗಿದ್ದು, 60,85,62,479 ಎರಡನೇ ಡೋಸ್‌ಗಳನ್ನು ನೀಡಲಾಗಿದೆ ಎಂದು ಸಚಿವಾಲಯ ವಿವವರಿಸಿದೆ.
'ಭಾರತದ COVID-19 ವ್ಯಾಕ್ಸಿನೇಷನ್ ಕವರೇಜ್ ಶನಿವಾರ 145.40 ಕೋಟಿ (145,40,51,828) ದಾಟಿದೆ. ಶನಿವಾರ ಸಂಜೆ 7 ಗಂಟೆಯವರೆಗೆ 22 ಲಕ್ಷಕ್ಕೂ ಹೆಚ್ಚು (22,56,362) ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ' ಎಂದು ಸಚಿವಾಲಯ ತಿಳಿಸಿದೆ.
ಕೋವಿಡ್ನಿಂದ ದೇಶದ ಅತ್ಯಂತ ದುರ್ಬಲ ಜನಸಂಖ್ಯೆಯ ಗುಂಪುಗಳನ್ನು ರಕ್ಷಿಸುವ ಸಾಧನವಾಗಿ ವ್ಯಾಕ್ಸಿನೇಷನ್ ಅಭಿಯಾನವನ್ನು ನಿಯಮಿತವಾಗಿ ಪರಿಶೀಲಿಸಲಾಗುತ್ತಿದೆ ಮತ್ತು ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಇದನ್ನೂ ಓದಿ:ಸೇನಾ ಹೆಲಿಕಾಪ್ಟರ್ ಪತನ ಪ್ರಕರಣ: ಮುಂದಿನ ವಾರ ತನಿಖಾ ವರದಿ ಸಲ್ಲಿಕೆ ಸಾಧ್ಯತೆ