ಕರ್ನಾಟಕ

karnataka

ದೇಶದಲ್ಲಿ 1,67,059 ಸೋಂಕಿತರು ಪತ್ತೆ, 1,192 ಮಂದಿ ಬಲಿ

By

Published : Feb 1, 2022, 9:23 AM IST

ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 17,43,059 ಇದ್ದು, ದೈನಂದಿನ ಪ್ರಕರಣಗಳು 2 ಲಕ್ಷಕ್ಕಿಂತ ಕಡಿಮೆ ಕಂಡು ಬರುತ್ತಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

India Corona
India Corona

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 1,67,059 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 1,192 ಮಂದಿಗೆ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ 2,54,076 ಮಂದಿ ಕೋವಿಡ್​​ನಿಂದ ಚೇತರಿಕೆ ಕಂಡಿದ್ದಾರೆ. ಸದ್ಯಕ್ಕೆ ದೇಶದಲ್ಲಿ 17,43,059 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಕೋವಿಡ್​ ಪಾಸಿಟಿವಿಟಿ ರೇಟ್ ಶೇ 11.69 ಇದೆ.

ಇದನ್ನೂ ಓದಿ:Central Budget: ಹಣಕಾಸು ಸಚಿವಾಲಯದಿಂದ ಟ್ಯಾಬ್​ನೊಂದಿಗೆ ಹೊರಟ ನಿರ್ಮಲಾ ಸೀತಾರಾಮನ್

ವ್ಯಾಕ್ಸಿನೇಷನ್​: ಭಾರತದ ದೈನಂದಿನ ಪ್ರಕರಣಗಳು 2 ಲಕ್ಷಕ್ಕಿಂತ ಕಡಿಮೆ ಕಂಡುಬರುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ಈವರೆಗೆ ಸುಮಾರು 1,66,68,48,204 ಕೋಟಿ ಡೋಸ್​ ವ್ಯಾಕ್ಸಿನೇಷನ್ ನೀಡಲಾಗಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details