ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಅಬ್ಬರ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 30,615 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,27,23,558ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ 30 ಸಾವಿರ ಕೋವಿಡ್ ಸೋಂಕಿತರು ಪತ್ತೆ, 514 ಮಂದಿ ಸಾವು - corona update
ದೇಶದಲ್ಲಿ ಕಳೆದ ಕೆಲವು ದಿನಗಳಿಂದ 50 ಸಾವಿರಕ್ಕಿಂತ ಕಡಿಮೆ ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 30,615 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 514 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದೊಂದು ದಿನದಲ್ಲಿ 514 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 82,988 ಜನ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ ದೇಶದಲ್ಲಿ 4,23,127 ಸಕ್ರಿಯ ಪ್ರಕರಣಗಳಿವೆ.
ಮಂಗಳವಾರ ಪತ್ತೆಯಾದ ಸೋಂಕಿತರಿಗೆ ಹೋಲಿಸಿದ್ರೆ ಕಳೆದ 24 ಗಂಟೆಯಲ್ಲಿ ಕಂಡುಬಂದ ಸೋಂಕಿತರ ಸಂಖ್ಯೆಯಲ್ಲಿ 11% ಹೆಚ್ಚಳವಾಗಿದೆ.