ನವದೆಹಲಿ: 2020ನೇ ವರ್ಷದ ದೇಶದಲ್ಲಿನ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಟಾಪ್ 10 ಪೊಲೀಸ್ ಠಾಣೆಗಳ ಪಟ್ಟಿಯನ್ನು ಭಾರತ ಸರ್ಕಾರ ಇಂದು ಪ್ರಕಟಿಸಿದೆ. ಮಣಿಪುರದ ಥೌಬಲ್ ಜಿಲ್ಲೆಯ ನಾಂಗ್ಪೋಕ್ ಸೆಕ್ಮೈ ಪೊಲೀಸ್ ಠಾಣೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.
ಹೆಚ್ಚು ಪರಿಣಾಮಕಾರಿಯಾದ ಕಾರ್ಯ ಚಟುವಟಿಕೆಯನ್ನು ಉತ್ತೇಜಿಸಲು ಮತ್ತು ಆರೋಗ್ಯಕರ ಸ್ಪರ್ಧೆಯನ್ನು ತರಲು ಕೇಂದ್ರ ಗೃಹ ಸಚಿವಾಲಯವು ಪ್ರತಿವರ್ಷ ದೇಶಾದ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸುವ ಪೊಲೀಸ್ ಠಾಣೆಗಳನ್ನು ಆಯ್ಕೆ ಮಾಡುತ್ತದೆ.
2015ರಲ್ಲಿ ಗುಜರಾತ್‌ನ ಕಚ್‌ನಲ್ಲಿ ನಡೆದ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಟಾಪ್ 10 ಪೊಲೀಸ್ ಠಾಣೆಗಳ ಹೆಸರು ಸೂಚಿಸುವಂತೆ ತಿಳಿಸಿದ್ದರು. ಅಂದಿನಿಂದ ಪ್ರತಿ ವರ್ಷ ಪೊಲೀಸ್ ಮಹಾನಿರ್ದೇಶಕರ ನಿರ್ದೇಶನದ ಮೇರೆಗೆ ಪೊಲೀಸ್ ಠಾಣೆಗಳನ್ನು ಆಯ್ಕೆ ಮಾಡಲಾಗುತ್ತದೆ. ಪೊಲೀಸ್ ಠಾಣೆಗಳ ಕಾರ್ಯಕ್ಷಮತೆ, ಮೂಲಸೌಕರ್ಯದ ಆಧಾರದ ಮೇಲೆ ಶ್ರೇಣೀಕರಿಸಲಾಗುತ್ತದೆ. ಈ ವರ್ಷದ ಅತ್ಯುತ್ತಮ ಪೊಲೀಸ್ ಠಾಣೆಗಳಿಗಾಗಿ ಗೃಹ ಸಚಿವಾಲಯವು ಸಮೀಕ್ಷೆ ನಡೆಸಿತ್ತು.
2020ರ ದೇಶದ ಟಾಪ್ 10 ಪೊಲೀಸ್ ಠಾಣೆಗಳಿವು..
1. ಮಣಿಪುರದ ಥೌಬಲ್ ಜಿಲ್ಲೆಯ ನಾಂಗ್ಪೋಕ್ ಸೆಕ್ಮೈ ಪೊಲೀಸ್ ಠಾಣೆ
2. ತಮಿಳುನಾಡಿನ ಸೇಲಂ ನಗರದ ಎಡಬ್ಲ್ಯೂಪಿಎಸ್-ಸುರಮಂಗಲಂ ಠಾಣೆ
3. ಅರುಣಾಚಲ ಪ್ರದೇಶದ ಚಾಂಗ್ಲಾಂಗ್ನ ಖರ್ಸಾಂಗ್ ಠಾಣೆ
4. ಛತ್ತೀಸ್ಗಢದ ಸೂರಜ್‌ಪುರದ ಭೈಯಾ ಠಾಣೆ