ನವದೆಹಲಿ: ಕೇಂದ್ರ ಸರ್ಕಾರದ ಸ್ವಾಮ್ಯದ ಬಿಎಸ್‌ಎನ್‌ಎಲ್ ಈ ವರ್ಷದ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದೊಳಗೆ 4ಜಿ ಮತ್ತು 5ಜಿ ನೆಟ್‌ವರ್ಕ್ ಹೊಂದಲಿದೆ. ಟಿಸಿಎಸ್ ಕಂಪನಿಯ ಸಹಯೋಗದಲ್ಲಿ ಟೆಲಿಮ್ಯಾಟಿಕ್ಸ್ ಅಭಿವೃದ್ಧಿ ಕೇಂದ್ರ (ಸಿ-ಡಾಟ್-ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್) ಅಭಿವೃದ್ಧಿಪಡಿಸಿರುವ ನೆಟ್‌ವರ್ಕ್ ತಂತ್ರಜ್ಞಾನವನ್ನು ಬಿಎಸ್ಎನ್ಎಲ್ಗೆ ಅವಳಡಿಸಲಾಗುತ್ತಿದೆ.
ನೆಟ್‌ವರ್ಕ್ ತಂತ್ರಜ್ಞಾನ ಅಭಿವೃದ್ಧಿಗೆ ಜಾಗತಿಕ ಟೆಲಿಕಾಂ ದೈತ್ಯರು ಶತಕೋಟಿ ಡಾಲರ್ಗಳನ್ನು ಹೂಡಿಕೆ ಮಾಡಿದ್ದು, ಸುಮಾರು 30 ಮಿಲಿಯನ್ ಡಾಲರ್ ವೆಚ್ಚದಲ್ಲಿ ದೇಶೀಯವಾಗಿ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಕಾರ್ಯವನ್ನು ನಾವು ಪೂರ್ಣಗೊಳಿಸಲಿದ್ದೇವೆ. ಶೀಘ್ರದಲ್ಲೇ ಈ ನೆಟ್‌ವರ್ಕ್ ಅನ್ನು ಬಿಎಸ್‌ಎನ್‌ಎಲ್ ನೆಟ್‌ವರ್ಕ್‌ನಲ್ಲಿ ನಿಯೋಜಿಸಲಾಗುವುದು ಎಂದು ಸಿ-ಡಾಟ್ನ ಕಾರ್ಯನಿರ್ವಾಹಕ ನಿರ್ದೇಶಕ ರಾಜ್‌ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.