ಹೈದರಾಬಾದ್ :ಇಂಡಿಗೋ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡುವ ಮೂಲಕ ಹೈದರಾಬಾದ್ ಶಂಷಾಬಾದ್ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಸ್ವಲ್ಪ ಸಮಯದ ಮಟ್ಟಿಗೆ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ದುಬೈನಿಂದ ಬಂದ ಇಂಡಿಗೋ ವಿಮಾನದಲ್ಲಿ ಬಾತ್ರೂಮ್ ಅನ್ನು ಲಾಕ್ ಮಾಡಿದ್ದ ಕಾರಣದಿಂದಾಗಿ, ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನ ಲ್ಯಾಂಡ್ ಆದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.