ನವದೆಹಲಿ: ಪ್ರಯಾಣಿಕನೋರ್ವನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಇಂಡಿಗೋ ವಿಮಾನವು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಆದರೆ, ವೈದ್ಯರ ತಂಡವು ಕರಾಚಿ ವಿಮಾನ ನಿಲ್ದಾಣಕ್ಕೆ ಬರುವಷ್ಟರಲ್ಲಿ ಪ್ರಯಾಣಿಕ ಮೃತಪಟ್ಟಿದ್ದಾನೆ.
ಸಂಯುಕ್ತ ಅರಬ್ ಸಂಸ್ಥಾನ (ಯುಎಇ)ದ ಶಾರ್ಜಾದಿಂದ ಉತ್ತರ ಪ್ರದೇಶದ ಲಖನೌಗೆ ಹೊರಟಿದ್ದ ಇಂಡಿಗೋ ವಿಮಾನ - 6E 1412 ಪ್ರಯಾಣಿಕನ ತುರ್ತು ಪರಿಸ್ಥಿತಿಯಿಂದಾಗಿ ಕರಾಚಿಯಲ್ಲಿ ಎಮರ್ಜೆನ್ಸಿ ಲ್ಯಾಂಡ್ ಆಗಿತ್ತು.