ಇಂದೋರ್ (ಮಧ್ಯಪ್ರದೇಶ): ನಗರದ ಗೋದಾಮು ಒಂದರಲ್ಲಿ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ 16,000 ಕೆಜಿ ಗಾಂಜಾವನ್ನು ಇಂದೋರ್ ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದಾರೆ.
ನಮ್ಮ ತಂಡವು ಸ್ಥಳದ ಮೇಲೆ ದಾಳಿ ನಡೆಸಿ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ 16,000 ಕೆಜಿ ಗಾಂಜಾ ತುಂಬಿದ 270 ಚೀಲಗಳನ್ನು ವಶಪಡಿಸಿಕೊಂಡಿದೆ. ನಾವು ಇದುವರೆಗೆ ಐದು ಜನರನ್ನು ಬಂಧಿಸಿದ್ದೇವೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಇಂದೋರ್ನ ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಗುರು ಪ್ರಸಾದ್ ಪರಾಶರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಓದಿ:ಟ್ಯಾಂಕರ್ನಿಂದ ವಿಷಾನಿಲ ಸೋರಿಕೆ.. ಐವರ ಸಾವು, 20ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲು!