ಕಾನ್ಪುರ(ಉತ್ತರ ಪ್ರದೇಶ): ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದ ಇನ್ಸ್‌ಪೆಕ್ಟರ್ ನಾಗೇಂದ್ರ ಸಿಂಗ್ ಯಾದವ್ ಅವರನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗಿದೆ. ಇನ್ಸ್‌ಪೆಕ್ಟರ್ ವಿರುದ್ಧ ಹಲವು ದೂರುಗಳು ಬಂದಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಆನಂದ ಕುಲಕರ್ಣಿ ತಿಳಿಸಿದ್ದಾರೆ.
ದೂರಿನನ್ವಯ ಪೊಲೀಸ್ ಇಲಾಖೆಯಲ್ಲಿ ಗಂಭೀರವಾಗಿ ತನಿಖೆ ನಡೆದಿದೆ. ಅವರ ವಿರುದ್ಧ ನಿರಂತರವಾಗಿ ದೂರುಗಳು ಬರುತ್ತಿದ್ದವು. ಮೂರು ಬಾರಿ ದುರ್ನಡತೆ ಪ್ರದರ್ಶಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ತಮ್ಮ ಫೇಸ್‌ಬುಕ್, ಟ್ವಿಟರ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ನಿರಂತರವಾಗಿ ಅಸಭ್ಯ ಟೀಕೆಗಳನ್ನು ಮಾಡುತ್ತಿದ್ದರು.