ಹಲ್ದ್ವಾನಿ: ಉತ್ತರಾಖಂಡದ ಹಲ್ದ್ವಾನಿಯ ಟಿಪಿ ನಗರ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಪೊಲೀಸ್ ಇನ್ಸ್ಪೆಕ್ಟರ್ಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆರು ವರ್ಷದ ಬಾಲಕಿಗೆ ಕಿರುಕುಳ ನೀಡಿದ್ದಕ್ಕಾಗಿ ಈ ರೀತಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಬಾಲಕಿಯ ಪೋಷಕರು ಆತನನ್ನು ಥಳಿಸುವ ಮೊದಲು ಇನ್ಸ್ಪೆಕ್ಟರ್ ಕಿರುಕುಳ ನೀಡುತ್ತಿರುವ ಘಟನೆಯನ್ನು ರೆಕಾರ್ಡ್ ಮಾಡಿದ್ದಾರೆ. ಹಾಗೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.