ಹೈದರಾಬಾದ್ (ತೆಲಂಗಾಣ): ಪ್ರಧಾನಿ ನರೇಂದ್ರ ಮೋದಿ ಅವರು ಕೊವಿಶೀಲ್ಡ್ ಲಸಿಕೆ ತೆಗೆದುಕೊಂಡಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ಭಾರತ್ ಬಯೋಟೆಕ್, ಪ್ರಧಾನಮಂತ್ರಿಯ ಬದ್ಧತೆಯಿಂದ ಪ್ರೇರೇಪಿತವಾಗಿರುವುದಾಗಿ ತಿಳಿಸಿದೆ.
ಇಂದಿನಿಂದ ದೇಶದಲ್ಲಿ ಎರಡನೇ ಹಂತದ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ಆರಂಭವಾಗಿದ್ದು, 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ನೀಡಲಾಗುತ್ತಿದೆ. ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಯಲ್ಲಿ ಪಿಎಂ ಮೋದಿ ಭಾರತ್ ಬಯೋಟೆಕ್ನ ಕೊವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.