ನವದೆಹಲಿ:ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆರೋಪವನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಉನ್ನತ ಮೂಲಗಳು ಪ್ರಿಯಾಂಕಾ ವಾದ್ರಾ ಅವರ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳು ಹ್ಯಾಕ್ ಆಗಿಲ್ಲ ಎಂದು ಸ್ಪಷ್ಟಪಡಿಸಿವೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮಕ್ಕಳ ಇನ್‌ಸ್ಟಾಗ್ರಾಮ್ ಖಾತೆಗಳು ಹ್ಯಾಕ್ ಆಗಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಹೇಳಿವೆ.
ಇತ್ತೀಚೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಮಕ್ಕಳ ಇನ್ಸ್ಟಾ ಖಾತೆಗಳನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡುತ್ತಿದೆ ಎಂದು ಆರೋಪ ಮಾಡಿದ್ದರು. ಇದನ್ನು ಗಮನಕ್ಕೆ ತೆಗೆದುಕೊಂಡು ತನಿಖೆ ನಡೆಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.