ಶ್ರೀಗಂಗಾನಗರ: ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುಂಡಿಕ್ಕಿ ಹತ್ಯೆಗೈದಿದೆ.
ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಈ ವ್ಯಕ್ತಿ ಭಾರತೀಯ ಭೂಪ್ರದೇಶಕ್ಕೆ ನುಸುಳಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿದ ಬಿಎಸ್ಎಫ್ ಸಿಬ್ಬಂದಿ ಶರಣಾಗುವಂತೆ ಎಚ್ಚರಿಕೆ ನೀಡಿದ್ದಾರೆ. ಆದರೆ ಪರಾರಿಯಾಗಲು ಆತ ಯತ್ನಿಸಿದ್ದು, ಗುಂಡು ಹಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.