ನವದೆಹಲಿ :ಕಳೆದ ಮೂರು ದಿನಗಳಿಂದ ಬಾಲಿವುಡ್ ನಟ ಸೋನು ಸೂದ್ ನಿವಾಸ, ಕಚೇರಿ ಸೇರಿ ವಿವಿಧ ಸ್ಥಳಗಳಲ್ಲಿ ಶೋಧಕಾರ್ಯ ನಡೆಸಿರುವ ಕಂದಾಯ ಇಲಾಖೆ ಇದೀಗ ಮಹತ್ವದ ಮಾಹಿತಿ ಹಂಚಿಕೊಂಡಿದೆ. ನಟ 20 ಕೋಟಿ ರೂಪಾಯಿ ಆದಾಯ ತೆರಿಗೆ ವಂಚನೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೆಲ ಸಾಕ್ಷ್ಯಗಳು ಲಭ್ಯವಾಗಿವೆ ಎಂಬ ಮಾಹಿತಿ ಕೂಡ ಹಂಚಿಕೊಂಡಿದೆ.
ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ಸಾವಿರಾರು ಜನರಿಗೆ ಸಹಾಯ ಮಾಡುವ ಮೂಲಕ ಅವರ ಜೀವನದಲ್ಲಿ ರಿಯಲ್ ಹೀರೋ ಆಗಿ ಹೊರಹೊಮ್ಮಿದ್ದ ನಟ ಸೋನು ಸೂದ್ ಕಳೆದ ಕೆಲ ದಿನಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಭೇಟಿ ಮಾಡಿದ್ದರು. ಈ ವೇಳೆ ಅವರನ್ನ ಅಲ್ಲಿನ ಸರ್ಕಾರಿ ಕಾರ್ಯಕ್ರಮಗಳಿಗೆ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿತ್ತು. ಇದರ ಬೆನ್ನಲ್ಲೇ ಐಟಿ ಇಲಾಖೆ ಅವರಿಗೆ ಶಾಕ್ ನೀಡಿತ್ತು.