ನೋಯ್ಡಾ(ಉತ್ತರ ಪ್ರದೇಶ): ನಿವೃತ್ತ ಐಪಿಎಸ್ ಅಧಿಕಾರಿ ರಾಮ್ ನಾರಾಯಣ್ ಸಿಂಗ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಮೂಲಗಳ ಪ್ರಕಾರ, ನೋಯ್ಡಾದ ಸೆಕ್ಟರ್ 50ರಲ್ಲಿರುವ ಅವರ ನಿವಾಸದ ನೆಲಮಾಳಿಗೆಯಲ್ಲಿ ನಿರ್ಮಿಸಲಾದ ಲಾಕರ್‌ನಲ್ಲಿ ಅಪಾರ ಪ್ರಮಾಣದ ಕಪ್ಪು ಹಣ ಇರಿಸಲಾಗಿದೆ ಹಾಗೂ ನೆಲಮಾಳಿಗೆಯಲ್ಲಿ 650 ಲಾಕರ್‌ಗಳಿದ್ದು, ಅಘೋಷಿತ ನಗದು ಇರುವ ಬಗ್ಗೆ ಇಲಾಖೆಗೆ ಮಾಹಿತಿ ಲಭಿಸಿದೆ. ಹಾಗಾಗಿ 12 ಗಂಟೆಗೂ ಹೆಚ್ಚು ಕಾಲ ಐಟಿ ಶೋಧ ನಡೆಸಿದೆ ಎಂದು ತಿಳಿದು ಬಂದಿದೆ.
ಏಕಕಾಲದಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೋಯ್ಡಾ ಮತ್ತು ಗಾಜಿಯಾಬಾದ್‌ನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ ಎನ್ನಲಾಗ್ತಿದೆ. ಐಟಿ ಇಲಾಖೆಯ ಮೂಲಗಳ ಪ್ರಕಾರ ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ ಮತ್ತು ಇದು ಕೇವಲ ಶೋಧ ಕಾರ್ಯಾಚರಣೆಯಾಗಿದೆ ಎಂದು ಅವರು ಹೇಳಿದ್ದಾರೆ. ಬೇನಾಮಿ ಆಸ್ತಿ ಹೊಂದಿರುವ ಬಗ್ಗೆ ಅವರು ಪರಿಶೀಲಿಸುತ್ತಿದ್ದಾರೆ. ಇನ್ನೂ ಶೋಧ ಕಾರ್ಯ ನಡೆಯುತ್ತಿದ್ದು, ಮನೆಯೊಳಗೆ ಏನೇನು ಪತ್ತೆಯಾಗಿದೆ ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.