ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನ ಪ್ರಮುಖ ರಿಯಲ್ ಎಸ್ಟೇಟ್ ಡೆವಲಪರ್‌ಗಳ ನಿವಾಸಗಳು ಸೇರಿದಂತೆ ತೆರಿಗೆ ವಂಚನೆ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆ ಗುರುವಾರ ಹಲವು ಸ್ಥಳಗಳಲ್ಲಿ ದಾಳಿ ನಡೆಸಿತು.
ಅಧಿಕೃತ ಮೂಲಗಳ ಪ್ರಕಾರ, ಐಟಿ ಅಧಿಕಾರಿಗಳು ಶಿಲ್ಪಾ ಮತ್ತು ಶಿವಾಲಿಕ್ ಬಿಲ್ಡರ್ಸ್ ಗ್ರೂಪ್ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ ಅಹಮದಾಬಾದ್‌ನ ಒಟ್ಟು 25 ಸ್ಥಳಗಳಲ್ಲಿ ಆದಾಯ ತೆರಿಗೆ ತಂಡ ದಾಳಿ ನಡೆಸಿದೆ.