ನಾರಾಯಣಪುರ(ಛತ್ತೀಸ್ಗಢ): ಗಸ್ತು ತಿರುಗುತ್ತಿದ್ದ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಕ್ಸಲರ ಐಇಡಿ ಸ್ಪೋಟಕ ದಾಳಿಯಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ)ನ ಸಹಾಯಕ ಸಬ್ ಇನ್ಸ್ಪೆಕ್ಟರ್ ಹುತಾತ್ಮರಾಗಿದ್ದು, ಮತ್ತೋರ್ವ ಹೆಡ್ ಕಾನ್ಸ್ಟೇಬಲ್ ಗಾಯಗೊಂಡಿರುವ ಘಟನೆ ಛತ್ತೀಸ್ಗಢ್ನ ನಾರಾಯಣಪುರ ಜಿಲ್ಲೆಯಲ್ಲಿ ನಡೆದಿದೆ.
ರಾಜೇಂದ್ರಸಿಂಗ್ ಹುತಾತ್ಮ ಎಎಸ್ಐ ಆಗಿದ್ದು, ಹೆಡ್ ಕಾನ್ಸ್ಟೇಬಲ್ ಮಹೇಶ್ ಎಂಬುವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಜಧಾನಿ ರಾಯಪುರಕ್ಕೆ ಏರ್ಲಿಫ್ಟ್ ಮಾಡಲಾಗಿದೆ. ಹುತಾತ್ಮ ರಾಜೇಂದ್ರ ಸಿಂಗ್ ಉತ್ತರಾಖಂಡ್ನ ತೆಹ್ರಿ ಗರ್ವಾಲ್ ಜಿಲ್ಲೆಯವರಾಗಿದ್ದಾರೆ.