ಕರ್ನಾಟಕ

karnataka

ETV Bharat / bharat

Job Alert: ಐಟಿಪಿಬಿಯಲ್ಲಿ ಕಾನ್​ಸ್ಟೆಬಲ್ ಹುದ್ದೆ; ಎಸ್​ಎಸ್​ಎಲ್​ಸಿ ಓದಿದ್ರೆ ಸಾಕು - ಇಂಡೋ ಟಿಬೆಟಿಯನ್​ ಗಡಿ ಭದ್ರತಾ ಪಡೆ

ವಾಹನ ಚಾಲನೆಯಲ್ಲಿ ತರಬೇತಿ ಹೊಂದಿರುವ, ಎಸ್​ಎಸ್​ಎಲ್​ಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ITBP Recruitment for Constable Driver post
ITBP Recruitment for Constable Driver post

By

Published : Aug 1, 2023, 5:27 PM IST

ಕೇಂದ್ರ ಸರ್ಕಾರದ ಗೃಹ ಇಲಾಖೆ ಅಡಿ ಬರುವ ಇಂಡೋ- ಟಿಬೆಟಿಯನ್​ ಗಡಿ ಭದ್ರತಾ ಪಡೆ (ಐಟಿಬಿಪಿ)ಯಲ್ಲಿ ಖಾಲಿ ಇರುವ 458 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಾನ್​ಸ್ಟೆಬಲ್​ ಡ್ರೈವರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಾಹನ ಚಾಲನೆಯಲ್ಲಿ ತರಬೇತಿ ಹೊಂದಿರುವ, ಎಸ್​ಎಸ್​ಎಲ್​ಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅವಧಿ ವಿಸ್ತರಿಸಿದ ಅಧಿಸೂಚನೆ

ಹುದ್ದೆಗಳ ವಿವರ: ಕಾನ್​ಸ್ಟೆಬಲ್​ ಡ್ರೈವರ್ ನಲ್ಲಿ ಖಾಲಿ ಇರುವ ಒಟ್ಟು 458 ಹುದ್ದೆಗಳ ಭರ್ತಿಗೆ ಮುಂದಾಗಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ಶಿಕ್ಷಣ ಮಂಡಳಿಯಿಂದ ಎಸ್​ಎಸ್​ಎಲ್​ಸಿ ಶಿಕ್ಷಣ ಪಡೆದಿರಬೇಕು. ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ವಯೋಮಿತಿ: ವಯೋಮಿತಿ ಕನಿಷ್ಠ 21 ರಿಂದ ಗರಿಷ್ಠ 27 ವರ್ಷ. 27-07-1996ಕ್ಕಿಂತ ನಂತರ ಜನಿಸಿದ ಮತ್ತು ಜುಲೈ 26- 2002ರ ಒಳಗೆ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಹೇಗೆ?: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ನಿವೃತ್ತ ಸೇವಾ ನೌಕರರಿಗೆ ಯಾವುದೇ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳ ದೈಹಿಕ ಪರೀಕ್ಷೆ (ಪಿಇಟಿ), ದೈಹಿಕ ಗುಣಮಟ್ಟ ಪರೀಕ್ಷೆ (ಪಿಎಸ್​ಟಿ), ಲಿಖಿತ ಪರೀಕ್ಷೆ, ಮೂಲ ಪ್ರತಿಗಳ ಪರಿಶೀಲನೆ, ಪ್ರಾಯೋಗಿಕ ಪರೀಕ್ಷೆ ಮತ್ತು ಮೆಡಿಕಲ್​ ಪರೀಕ್ಷೆ ಹಾಗೂ ರಿವ್ಯೂ ಮೆಡಿಕಲ್​ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಜೂನ್​ 27 ರಿಂದ ಆರಂಭವಾಗಿದ್ದು, ಜುಲೈ 27ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಈ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದ್ದು, ಆಗಸ್ಟ್​ 10ರ ವರೆಗೆ ವಿಸ್ತರಣೆ ಮಾಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಆನ್​ಲೈನ್​ನಲ್ಲಿ ನಿಗದಿಸಲಾದ ಸರಿಯಾದ ಮಾಹಿತಿ ಮತ್ತು ವಿವರಗಳನ್ನು ನೀಡಬೇಕು. ಶೈಕ್ಷಣಿಕ ಅರ್ಹತೆ ಮತ್ತು ದಾಖಲೆಗಳ ಕುರಿತು ವಿವರಗಳನ್ನು ಭರ್ತಿ ಮಾಡಬೇಕು. ಅರ್ಜಿ ಶುಲ್ಕ ಮಾಹಿತಿ ಭರಿಸಿ ಬಳಿಕ ಸಲ್ಲಿಕೆ ಬಟನ್​ ಕ್ಲಿಕ್​ ಮಾಡಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ಕುರಿತು ವಿವರವಾದ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ recruitment.itbpolice.nic.in ಈ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದು.

ಇದನ್ನೂ ಓದಿ:ಬೆಂಗಳೂರಿನ ಐಐಎಸ್ಸಿಯಲ್ಲಿ ಜೆಇ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ABOUT THE AUTHOR

...view details