ಲಡಾಖ್: 75ನೇ ಸ್ವಾತಂತ್ರ್ಯ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರು 'ಆಜಾದಿ ಕಾ ಅಮೃತ್ ಮಹೋತ್ಸವ' ಆಚರಣೆಯ ದೃಷ್ಟಿಯಿಂದ ಸಮುದ್ರದಿಂದ 12,000 ಅಡಿ ಎತ್ತರದಲ್ಲಿ 'ತ್ರಿವರ್ಣ' ಧ್ವಜ ಹಾರಿಸುವ ಮೂಲಕ ದೇಶಪ್ರೇಮ ಮೆರೆದಿದ್ದಾರೆ.
ಆಗಸ್ಟ್ 15ರಂದು ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತದೆ. ಈ ಶುಭ ಸಮಯವನ್ನು ಆಜಾದಿ ಕಾ ಅಮೃತ್ ಮಹೋತ್ಸವ ಎಂದು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿದೆ. ಈ ಕುರಿತು ಈಗಾಗಲೇ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಇದೀಗ ನಮ್ಮ ಹೆಮ್ಮೆಯ ಯೋಧರು ಸಹ ಅಮೃತ್ ಮಹೋತ್ಸವದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಎಲ್ಲಾ ನಾಗರಿಕರು ತಮ್ಮ ಮನೆಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಧ್ವಜಾರೋಹಣ ಮಾಡುವಂತೆ ಒತ್ತಾಯಿಸಿದ್ದಾರೆ.